ರಾಜ್ಯದಲ್ಲಿ ಅಭಿವೃದ್ಧಿ ಹಾಳು ಮಾಡಿದ್ದು ಬಿಜೆಪಿ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರ ಅಧ್ಯಯನ ತಂಡ ಭೇಟಿ ನೀಡಿದೆ. ಈಗಾಗಲೇ ರಾಜ್ಯದಲ್ಲಿ 195 ತಾಲೂಕು ಬರ ಅಂತ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ಮಳೆ ಇಲ್ಲದೆ 30 ಸಾವಿರ ಕೋಟಿ ಬೆಳೆಹಾನಿ ಆಗಿದೆ. 42 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದೆ ಎಂದು ಮಾಹಿತಿ ನೀಡಿದರು.
ಮಳೆ ಇಲ್ಲದೆ ರಾಜ್ಯದ ನಮ್ಮ ಜಲಾಶಯದಲ್ಲಿ ಸಹ ನೀರು ಇಲ್ಲ, ಅಪ್ಪರ್ ಕೃಷ್ಣ, ನಾರಾಯಣಪುರ ಡ್ಯಾಂ ಬಿಟ್ರೆ ಎಲ್ಲಾ ಡ್ಯಾಂಗಳಲ್ಲಿ ನೀರು ಕಡಿಮೆ ಆಗಿದೆ ಎಂದು ಹೇಳಿದರು. ಅಲ್ಲದೆ ನಾವು 4,860 ಕೋಟಿ ಪರಿಹಾರವನ್ನು ಕೇಂದ್ರಕ್ಕೆ ಕೇಳಿದ್ದೇವೆ. ಈ ಬಾರಿ ಒಂದು ರೀತಿ ಹಸಿರು ಬರ ಆಗಿದೆ. ಇದು ರಾಜ್ಯದಲ್ಲಿ ವಾಸ್ತವ ಪರಿಸ್ಥಿತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


