ಚಿತ್ರದುರ್ಗ: ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಡುವ ಕಾರಣಕ್ಕೆ ಮೂಡಾ ಹಗರಣವನ್ನು ಬಿಜೆಪಿ ಹಿಡಿದುಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಪ ಮುಕ್ತರಾಗಿಲ್ಲ ಎಂಬ ಬಿಜೆಪಿ ಹೇಳಿಕೆ ಪ್ರತಿಕ್ರಿಯಿಸಿ, ನನಗೆ ಕೇಳುವ ಪ್ರಶ್ನೆ, ನನಗೆ ಕೇಳಿ ಅದಕ್ಕೆ ನಾನು ಉತ್ತರ ಕೊಡುತ್ತೇನೆಂದರು.
ಈ ದೇಶದಲ್ಲಿ ಕಾನೂನು ಎಲ್ಲರಿಗೂ ಇದೆ. ಅವರು ಸುಪ್ರೀಂ ಕೋರ್ಟ್ ಗೆ ಹೋದರೆ, ನಾವು ಹೋಗುತ್ತೇವೆ. ಎಲ್ಲರಿಗೂ ಈ ಅವಕಾಶವಿದೆ. ಇವತ್ತಿನ ವಿಚಾರಕ್ಕೆ ಗೆಲುವು ಅಂತ ಪ್ರಶ್ನೆಯಲ್ಲ. ನಮಗೆ ನಂಬಿಕೆ ಇದೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಡಬೇಕಂತಲೇ ಬಿಜೆಪಿಯವರು ಹಳೆಯ ಪ್ರಕರಣವನ್ನು ವೈಯಕ್ತಿಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4