ಕಾಮಗಾರಿಗಳ ಕುರಿತು 4 ತಂಡ ರಚಿಸಿ ತನಿಖೆ ಮಾಡಿಸುತ್ತಿದ್ದೇವೆ ಎಂದು ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಗುಣಮಟ್ಟದ ಕಾಮಗಾರಿ ಆಗಿದೆಯಾ ಇಲ್ವಾ ಗೊತ್ತಾಬೇಕು. ಬೆಂಗಳೂರಿನಲ್ಲಿ 4 ತಂಡ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದೇವೆ. ವರದಿ ಕೊಟ್ಟ ಬಳಿಕ ತಪ್ಪು ಮಾಡಿಲ್ಲ ಅಂದ್ರೆ ಬಿಲ್ ಕೊಡುತ್ತೇವೆ. ಈ ರಾಜ್ಯವನ್ನು ಬಿಜೆಪಿಯವರು ಹಾಳು ಮಾಡಿದ್ದಾರೆ ಎಂದರು.
ನಾವು 135 ಸ್ಥಾನ ಗೆದ್ದಿದ್ದಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ ಬಿಜೆಪಿಯವರು ಗೆಲ್ಲಲಿಲ್ಲ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುವ ಗುರಿ ಇದೆ ಎಂದು ಬೆಳಗಾವಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


