ಬೆಂಗಳೂರು: ವಿಪಕ್ಷ ನಾಯಕರಿಗೆ ಗಾಳ ಹಾಕುತ್ತಿರುವ ಬಿಜೆಪಿ, ಶಾಸಕರಿಗೆ ಐವತ್ತು ಕೋಟಿ ರೂ. ಆಮಿಷ ಒಡ್ಡಿರುವುದಲ್ಲದೇ ರಾಜೀನಾಮೆ ನೀಡಿದ ಬಳಿಕ ಮರು ಚುನಾವಣೆಯ ವೆಚ್ಚವನ್ನೂ ಸಹ ತಾವೇ ಭರಿಸುವುದಾಗಿ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ವಿವಿಧ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಈ ರೀತಿಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುತ್ತಿದೆ ಎಂದು ಹರಿಹಾಯ್ದರು.
ಕೇಂದ್ರ ಬಿಜೆಪಿ ಸರ್ಕಾರದಿಂದ ಪ್ರೇರಿತವಾದ ತನಿಖಾ ಸಂಸ್ಥೆಗಳು ಕ್ಷುಲ್ಲಕ ಕಾರಣಗಳನ್ನು ಒಡ್ಡಿ ಕಾಂಗ್ರೆಸ್ ನಾಯಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುತ್ತಿದೆ. ಇದು ಚುನಾವಣೆಯಲ್ಲಿ ಪ್ರತಿಪಕ್ಷನ್ನು ದುರ್ಬಲಗೊಳಿಸುವ ಬಿಜೆಪಿ ತಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು
ದೇಶದ ಸ್ವಾತಂತ್ರ್ಯಕ್ಕೆ ದುಡಿದ ಪಕ್ಷವಾದ ಕಾಂಗ್ರೆಸ್ ಇಂದು ಸಂಕಷ್ಟದಲ್ಲಿದೆ. ಸ್ವಾತಂತ್ರ್ಯಕ್ಕೆ ಯಾವುದೇ ಕೊಡುಗೆ ನೀಡದ ಬಿಜೆಪಿ ಅಧಿಕಾರದಲ್ಲಿದೆ. ವಾಜಪೇಯಿ ಅವರ ಅವಧಿಯಲ್ಲಿ ಐದು ವರ್ಷ ಹಾಗೂ ನರೇಂದ್ರ ಮೋದಿ ನೇತೃತ್ವದಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿ ಇದೇ ರೀತಿಯಲ್ಲಿ ಅಧಿಕಾರ ಪಡೆಯಲು ಹಾತೊರೆಯುತ್ತಿದೆ ಎಂದು ಅವರು ಆಪಾದಿಸಿದರು. ಚುನಾವಣಾ ಅಭ್ಯರ್ಥಿಯ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಂಡರೆ, ಆತ ಯಾವುದೇ ಪ್ರಚಾರ ನಡೆಸಲು ಸಾಧ್ಯವಿಲ್ಲ. ಯಾವುದೇ ಸಭೆಗಳನ್ನು ನಡೆಸಲು ಸಾಧ್ಯವಿಲ್ಲ. ಯಾವುದೇ ಪ್ರವಾಸ ನಡೆಸಲು ಸಾಧ್ಯವಿಲ್ಲ. ಇದನ್ನು ಮನಗಂಡೇ ಬಿಜೆಪಿ ಈ ರೀತಿಯ ಕೆಲಸಕ್ಕೆ ಕೈ ಹಾಕಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


