ಲೋಕಸಭೆ ಚುನಾವಣೆ ಬಳಿಕ ಮಠಾಧೀಶರು, ದಲಿತರು, ಮುಸ್ಲಿಂರ ಮೂರನೇ ಶಕ್ತಿ ಹುಟ್ಟು ಹಾಕುತ್ತೇವೆ ಜೊತೆಗೆ ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.
ಈ ಕುರಿತು ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮೂರು ಗಂಟೆ ಮಾತಾಡಿದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ತಪ್ಪಿನಿಂದ ಬಿಜೆಪಿ ಬೆಳೆಯುತ್ತಿದೆ. ಇವತ್ತು ಬಸವತತ್ವದ ಆಧಾರದ ಮೇಲೆ ಸಂಘಟನೆ ಮಾಡಬೇಕಿದೆ. ನಾವು ಇದನ್ನು ತೀರ್ಮಾನ ಮಾಡಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಕೆಲವೇ ದಿನಗಳಲ್ಲಿ ಈ ಕುರಿತು ಹೇಳುತ್ತಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ನಡೆ ಕುರಿತು ಸಿಎಮ್ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಆದರೂ ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ?, ಇದೇನಾ ಅಚ್ಚೇದಿನ್ ಎಂದು ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


