ಕೋಲ್ಕತ್ತ: ನನ್ನ ಹೇಳಿಕೆಗಳನ್ನು ಮಾಧ್ಯಮದಲ್ಲಿ ತಿರುಚಿ ಅಪಪ್ರಚಾರ ನಡೆಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಧ್ಯಮಗಳು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬರೆದುಕೊಂಡಿದ್ದು, ‘ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ನಾನು ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ ಕೆಲವು ವಿಷಯಗಳನ್ನು ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದುರುದ್ದೇಶದೊಂದಿಗೆ ತಪ್ಪು ಮಾಹಿತಿ ಹಂಚಿದ್ದಾರೆ’ ಎಂದು ಹೇಳಿದ್ದಾರೆ.
ವೈದ್ಯಕೀಯ ಅಥವಾ ವಿದ್ಯಾರ್ಥಿಗಳ ಹೋರಾಟದ ವಿರುದ್ಧ ನಾನು ಒಂದೇ ಒಂದು ಪದವನ್ನು ಆಡಿಲ್ಲ ಎಂದು ಸ್ಪಷ್ಟಪಡಿಸಲು ಬಯುಸುತ್ತೇನೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಅವರ ಹೋರಾಟ ಪ್ರಾಮಾಣಿಕವಾಗಿದೆ. ನಾನು ಅವರಿಗೆ ಬೆದರಿಕೆ ಹಾಕಿಲ್ಲ. ಆದರೆ ಈ ಕುರಿತು ನನ್ನ ಮೇಲೆ ಆಪಾದನೆ ಹೊರಿಸಲಾಗಿದ್ದು, ಇದು ಸತ್ಯಕ್ಕೆ ದೂರವಾದ ಮಾತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ವಿರುದ್ಧ ಧ್ವನಿ ಎತ್ತಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q