ಚಿಕ್ಕಬಳ್ಳಾಪುರ : ವಿವಿಧ ಕಾರಣಗಳಿಗಾಗಿ ಎರಡು ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿ ಜನೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಸೆಪ್ಟೆಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ಎರಡರಿಂದ ಮೂರು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಬೇಕಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕಾರಣಕ್ಕೆ ಮುಂದೂಡಿಕೆಯಾಗಿತ್ತು.
ಬಳಿಕ ಅಗಸ್ಟ್ 28ರಂದು ಜನೋತ್ಸವಕ್ಕೆ ದಿನಾಂಕ ನಿಗದಿಯಾಗಿತ್ತಾದರೂ ಆ ಸಂದರ್ಭದಲ್ಲಿ ಗೌರಿ – ಗಣೇಶ ಹಬ್ಬ ಸಮೀಪದಲ್ಲಿರುವುದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣದಿಂದ ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy