ಬೆಂಗಳೂರು: ಗೃಹಲಕ್ಷ್ಮಿ ಸೇರಿದಂತೆ ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಂಚು ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು.
ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು ನಡೆಸಲಿ ಎಂದು ಗೃಹಲಕ್ಷ್ಮಿಯನ್ನು ನೀಡಲಾಗುತ್ತಿದೆ. ಇದನ್ನು ನಿಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಯತ್ನಿಸುತ್ತಿವೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q