ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಅವರು, ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ–ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡೋಣ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದಾರೆ. ಈ ಸಂಬಂಧ 8–10 ದಿನಗಳಲ್ಲಿ ಕುಮಾರಸ್ವಾಮಿಯವರು ಹೆಸರುಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC