ಪಾವಗಡ: ವಿಧಾನ ಪರಿಷತ್ ಚುನಾವಣೆ ಪ್ರಚಾರದಲ್ಲಿ ಸಕ್ರಿಯರಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಪಾವಗಡದ ಹೊರ ವಲಯದ ಬಿ.ಕೆ.ಹಳ್ಳಿ ಕ್ರಾಸ್ ಬಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.’
ಪ್ರಸನ್ನ ಕುಮಾರ್(46) ಹತ್ಯೆಗೀಡಾದವರು ಎಂದು ವರದಿಯಾಗಿದ್ದು, ತಮ್ಮ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಣಿ ಸದಸ್ಯರಾಗಿದ್ದ ಪ್ರಸನ್ನ ಕುಮಾರ್. ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿಯೂ ಸಕ್ರಿಯರಾಗಿದ್ದರು ಎನ್ನಲಾಗಿದೆ. ಆದರೆ ಇದೀಗ ಅವರ ಬರ್ಬರ ಹತ್ಯೆಯಾಗಿದೆ. ಕೊಲೆಗೆ ನಿಖರ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ಮುಂದಿನ ತನಿಖೆಯಿಂದ ಕೃತ್ಯದ ಹಿಂದಿನ ಕಾರಣ ಬಯಲಾಗಬೇಕಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700