ಬೆಂಗಳೂರು: ಬಿಜೆಪಿಯವರೇ ನೀವು ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಇರಲು ಸಾಧ್ಯವಿಲ್ಲ. ನಿಮ್ಮ ಕೇಡುಗಾಲ ಸಮೀಪಿಸುತ್ತಿದೆ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ. ಬಿಜೆಪಿ ನಿರ್ಣಾಮವಾಗಲಿದೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜಭವನ ಚಲೋ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಗೋಸುಂಬೆ ನಾಟಕ ರಾಜ್ಯದಲ್ಲಿ ನಡೆಯುವುದಿಲ್ಲ. ಜನರಿಗೆ ಅರ್ಥವಾಗಿದೆ. ನಾವು ಬಂಧನವಾದರೂ, ಜೈಲಿಗೆ ಹೋಗಲು ತಯಾರಾಗೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಪೊಲೀಸರು ತಡೆಯಬಹುದು. ಯಾರೂ ಎದೆಗುಂದುವ ಅಗತ್ಯವಿಲ್ಲ. ಪೊಲೀಸರು ಬಂಧಿಸಲಿ, ಜೈಲಿಗೆ ಹಾಕಲಿ ನೀವೆಲ್ಲರೂ ಗಟ್ಟಿಯಾಗಿ ನಿಲ್ಲಿ. ನೀವು ಧೈರ್ಯವಾಗಿರಿ ಎಂದರು.
ನಾಳೆ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಎಲ್ಲ ಶಾಸಕರು, ಪದಾಧಿಕಾರಿಗಳು, ಸಂಸದರು ನಿಮ್ಮ ಜಿಲ್ಲೆಗೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ. ಕಾಂಗ್ರೆಸ್ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz