ತುಮಕೂರು: 7ನೇ ತರಗತಿ ವಿದ್ಯಾರ್ಥಿ, ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ನಡೆದಿದೆ.
ಸರ್ವೊದಯ ಸ್ಕೂಲ್ ನಲ್ಲಿ 7ನೇ ತರಗತಿ ಓದುತ್ತಿದ್ದ ತ್ರಿಶಾಲ್, ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಡೇತ್ ನೋಟ್ ಬರೆದಿಟ್ಟಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx