ಸಹಾರನ್ ಪುರ: ಬಿಜೆಪಿ ನಾಯಕನೊಬ್ಬ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಸಹಾರನ್ ಪುರದಲ್ಲಿ ನಡೆದಿದೆ.
ಗುಂಡಿನ ದಾಳಿಯ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತೋರ್ವ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ.
ಪತ್ನಿ ಮೇಲೆ ಅನುಮಾನ ಹೊಂದಿದ್ದ ಯೋಗೇಶ್ ನಿತ್ಯ ಅವರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಲಾದ ಪಿಸ್ತೂಲ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4