ಲೋಕಸಭಾ ಚುನಾವಣೆಗೆ ಬಿಜೆಪಿಯು ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ. ಆದರೆ ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿದೆ. ಆದರೆ ಈ ಬೆನ್ನಲ್ಲೇ ರಾಜ್ಯದಲ್ಲಿ ಈ 10 ಮಾಜಿ ಸಚಿವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.
ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡ ಬಳಿಕವೇ ಈ ಎಲ್ಲರ ಪೈಕಿ ಯಾರಿಗೆಲ್ಲ ಟಿಕೆಟ್ ಸಿಗಲಿದೆ ಎಂಬುದು ಸ್ಪಷ್ಟವಾಗಲಿದೆ. ಆದರೆ ಈ ನಡುವೆ ಅಚ್ಚರಿ ಮಾಹಿತಿಯೊಂದು ಲಭ್ಯವಾಗಿದ್ದು ಮಾಜಿ ಸಚಿವರಾದ ವಿ. ಸೋಮಣ್ಣ, ಡಾ. ಸುಧಾಕರ್, ಬಿ. ಶ್ರೀರಾಮುಲು, ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿ.ಟಿ. ರವಿ, ಬಿ.ಸಿ. ಪಾಟೀಲ್, ಜೆ.ಸಿ.ಮಾಧುಸ್ವಾಮಿ, ಎಂ.ಪಿ.ರೇಣುಕಾಚಾರ್ಯ, ಮುರುಗೇಶ್ ನಿರಾಣಿ ಅವರನ್ನು ಲೋಕಸಮರಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆಯಂತೆ. ಪಟ್ಟಿಯಲ್ಲಿ ಇವರ ಹೆಸರೂ ಇರಲಿದೆ ಎನ್ನಲಾಗಿದೆ.
ತುಮಕೂರಿನಿಂದ ವಿ. ಸೋಮಣ್ಣ, ಚಿಕ್ಕಬಳ್ಳಾಪುರದಿಂದ ಡಾ. ಸುಧಾಕರ್, ಬಳ್ಳಾರಿಯಿಂದ ಬಿ. ಶ್ರೀರಾಮುಲು, ವಿಜಯಪುರದಿಂದ ಗೋವಿಂದ ಕಾರಜೋಳ, ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ-ಚಿಕ್ಕಮಗಳೂರು ಹಾಗೂ ಬೆಂಗಳೂರು ಉತ್ತರದಿಂದ ಸಿ.ಟಿ.ರವಿ, ಹಾವೇರಿಯಿಂದ ಬಿ.ಸಿ.ಪಾಟೀಲ್, ತುಮಕೂರಿನಿಂದ ಜೆ.ಸಿ. ಮಾಧುಸ್ವಾಮಿ, ದಾವಣಗೆರೆಯಿಂದ ಎಂ.ಪಿ. ರೇಣುಕಾಚಾರ್ಯ, ಬಾಗಲಕೋಟೆಯಿಂದ ಮುರುಗೇಶ್ ನಿರಾಣಿ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


