nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಗೆ ಹೋಗುವವರಿಗೆ ಶಾಕ್ ಕೊಡಲು ಮಹತ್ವದ ತೀರ್ಮಾನ ಕೈಗೊಂಡ ಬಿಜೆಪಿ ನಾಯಕರು
    ರಾಜ್ಯ ಸುದ್ದಿ August 23, 2023

    ಕಾಂಗ್ರೆಸ್ ಗೆ ಹೋಗುವವರಿಗೆ ಶಾಕ್ ಕೊಡಲು ಮಹತ್ವದ ತೀರ್ಮಾನ ಕೈಗೊಂಡ ಬಿಜೆಪಿ ನಾಯಕರು

    By adminAugust 23, 2023No Comments2 Mins Read
    bengaluru

    ಬೆಂಗಳೂರು: ಒಂದು ಕಡೆ ಕಾಂಗ್ರೆಸ್ ಆಪರೇಷನ್ ಆಟ ಶುರು ಮಾಡಿದ್ರೆ, ಇತ್ತ ಬಿಜೆಪಿ ಅದನ್ನು ದೊಡ್ಡ ಮಟ್ಟದಲ್ಲಿ ತಡೆಯುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದ್ರೆ ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆ, ನಾಯಕರ ಮನಸ್ಥಿತಿ ಬೇರೆಯದ್ದನ್ನೇ ಹೇಳುತ್ತಿದೆ.

    ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಾಂಬೆ ಫ್ರೆಂಡ್ಸ್‌ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ ಎಂಬ ಮನಸ್ಥಿತಿಗೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅಸಮಾಧಾನದ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿಗೆ ವಲಸೆ ಬಂದವರು ತಿರಗಾ ಕಾಂಗ್ರೆಸ್ ಬಾಗಿಲು ತಟ್ಟಿದರೆ ಸಿಕ್ಕಾಪಟ್ಟೆ ತಲೆಕೆಡಿಸಿಕೊಳ್ಳುವುದು ಬೇಡ ಎಂಬ ಮನಸ್ಥಿತಿಗೆ ಬಿಜೆಪಿ ರಾಜ್ಯ ನಾಯಕರು ಬಂದಿದ್ದಾರೆ.

    ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ‘ಪಕ್ಷ ಬಿಡುವವರ ಮನವೊಲಿಸೋಣ ಆದ್ರೆ ಅಂಗಲಾಚುವುದು ಬೇಡ. 2024ರ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿ. ಪಕ್ಷ ಸಂಘಟನೆ ಬಲಗೊಳಿಸುವ ಬಗ್ಗೆ ಮಾತ್ರ ಗಮನ ಹರಿಸಬೇಕು. ಕಾಲಕ್ಕೆ ತಕ್ಕಂತೆ ಎಲ್ಲವೂ ಆಗುತ್ತದೆ, ಈಗ ನಾವು ಎಡವಿದ್ದೇವೆ. ಶಾಸಕರ ಜೊತೆಗೆ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಬೇಕು. ನಮ್ಮದು ಕೇಡರ್ ಬೇಸ್ ಪಾರ್ಟಿ, ಕಾರ್ಯಕರ್ತರಿಗೆ ಧೈರ್ಯ ತುಂಬಬೇಕು. ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಗೊಂದಲದಿಂದ ಸಮಸ್ಯೆಯಾಗಿದೆ. ಬಿಎಲ್ಪಿ ನಾಯಕ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಶೀಘ್ರ ನಿರ್ಧರಿಸಿ. ಈ ಬಗ್ಗೆ ಬೇಕಿದ್ದರೆ ಮತ್ತೊಮ್ಮೆ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಾಯಿಸೋಣ ಅಂತಾ ಸಭೆಯಲ್ಲಿ ನಿರ್ಧರಿಸಲಾಗಿದೆ.

    ಈ ಮಧ್ಯೆ ಯಶವಂತಪುರ ಶಾಸಕ ಎಸ್.‌ಟಿ. ಸೋಮಶೇಖರ್ ಅಸಮಾಧಾನದಿಂದಾಗಿ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರಾದ ಸಿ.ಎಂ. ಮಾರೇಗೌಡ ಮತ್ತು ಧನಂಜಯ ಪಕ್ಷದಿಂದ ಉಚ್ಛಾಟನೆ ವಿಚಾರವೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಉಚ್ಛಾಟನೆ ಬಳಿಕ ನಾನು ಅವರನ್ನು ಉಚ್ಛಾಟನೆ ಮಾಡಿ ಎಂದು ಹೇಳಿಲ್ಲ ಎಂದು ಬಹಿರಂಗವಾಗಿ ಹೇಳುತ್ತಿರುವ ಸೋಮಶೇಖರ್ ನಡೆ ಬಗ್ಗೆಯೂ ಸಭೆಯಲ್ಲಿ ಪರೋಕ್ಷ ಆಕ್ಷೇಪ ವ್ಯಕ್ತವಾಗಿದೆ. ಮಾರೇಗೌಡ ಮತ್ತು ತಂಡದ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೋಮಶೇಖರ್ ಪಕ್ಷಕ್ಕೆ ಲಿಖಿತ ಪತ್ರ ನೀಡಿದ್ರು. ಉಚ್ಛಾಟನೆ ಬಳಿಕ ನಾನು ಕ್ರಮಕ್ಕೆ ಒತ್ತಾಯಿಸಿಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ ಎಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ.

    ಎಸ್‌ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಗೆ ಅಣಿಯಾಗಿರುವ ಮುನ್ನವೇ ನಿನ್ನೆ ದೊಡ್ಡ ಪ್ರಮಾಣದಲ್ಲಿ ಅವರ ಬೆಂಬಲಿಗರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್.ಟಿ.ಸೋಮಶೇಖರ್ ಬೆಂಬಲಿಗರಾದ, ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

    ಉಚ್ಛಾಟನೆ ಬಳಿಕ ನಾನು ಉಚ್ಛಾಟನೆಗೆ ಒತ್ತಾಯಿಸಿಲ್ಲ ಎಂಬ ಸೋಮಶೇಖರ್ ಹೇಳಿಕೆ ಬಗ್ಗೆ ರಾಜ್ಯ ನಾಯಕರು ಆಕ್ಷೇಪಿಸಿದ್ದಾರೆ. ಒಂದೆಡೆ ಸೋಮಶೇಖರ್ ಆಪ್ತ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಗಳು ಕಾಂಗ್ರೆಸ್ ಸೇರಿದ್ದಾರೆ. ಇನ್ನೊಂದೆಡೆ ಪಕ್ಷ ತ್ಯಜಿಸುವುದಿಲ್ಲ ಎಂದು ಸೋಮಶೇಖರ್ ಹೇಳುತ್ತಿದ್ದರೂ ಪೂರ್ಣ ಪ್ರಮಾಣದಲ್ಲಿ ನಂಬಲು ಬಿಜೆಪಿ ಹಿಂದೇಟು ಹಾಕುತ್ತಿದೆ.

    ಅತಿಯಾದ ಮನವೊಲಿಕೆ ಬೇಡ, ಪ್ರಯತ್ನ ಅಷ್ಟೇ ಮಾಡೋಣ ಎನ್ನುವ ನಿಲುವಿಗೆ ರಾಜ್ಯ ಬಿಜೆಪಿ ನಾಯಕರು ಬಂದಿದ್ದು, ಈಗ ಸೋಮಶೇಖರ್ ಏನು ಹೇಳುತ್ತಾರೋ ಅದನ್ನು ಎಲ್ಲಾ ಕೇಳಿಸಿಕೊಳ್ಳೋಣ. ಒಂದು ವೇಳೆ ಪಕ್ಷ ತೊರೆದು ಹೋದರೆ ಪರ್ಯಾಯ ನಾಯಕತ್ವದ ರೆಡಿ ಮಾಡುವುದಕ್ಕೆ ರಾಜ್ಯ ನಾಯಕರು ಅಂತಿಮ ತೀರ್ಮಾನಕ್ಕೆ ಬಂದಿದ್ದಾರೆ. ಹೀಗಾಗಿ ಸೋಮಶೇಖರ್ ನಡೆ ಕಾದು ನೋಡುವ ಬಗ್ಗೆ ಚಿಂತಿಸಿರುವ ಬಿಜೆಪಿ ನಾಯಕರು, ಪರ್ಯಾಯ ನಾಯಕನನ್ನು ಹುಟ್ಟುಹಾಕಲು ಚಿಂತನೆ ನಡೆಸಿದ್ದಾರೆ.

    ಸದ್ಯಕ್ಕೆ ಅವರ ಮಾತನ್ನ ಕೇಳೋಣ. ಪಕ್ಷ ತೊರೆದರೆ ಮುಂದೇನು ಮಾಡಬೇಕೋ ಮಾಡೋಣ. ಯಶವಂತಪುರದಲ್ಲಿ ಪಕ್ಷದ ಕಾರ್ಯಕರ್ತರಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಾಯಕತ್ವ ನೀಡಿದರೆ ಗೆಲುವು ಕಷ್ಟವೇನಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ…

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.