ಡಿ.4 ರಿಂದ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ರೆಡಿಯಾಗುತ್ತಿದೆ. ಸರ್ಕಾರ ಕಳೆದ ನಾಲೈದು ತಿಂಗಳಲ್ಲಿ ನಡೆಸಿರುವ ಆಡಳಿತ, ಗ್ಯಾರೆಂಟಿಗಳ ಘೋಷಣೆ, ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳನ್ನು ಪ್ರಶ್ನಿಸಲು ಬಿಜೆಪಿ ಸಿದ್ಧವಾಗಿದ್ದು, ಸೋಮವಾರ ಅಥವಾ ಮಂಗಳವಾರ ಆರ್. ಅಶೋಕ್ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು. ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಣಯದೊಂದಿಗೆ ಬಿಜೆಪಿ ಸರ್ಕಾರವನ್ನು ಎದುರಿಸಲಿದೆ.
ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಷ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿಯೇ ವಿಪಕ್ಷ ಬಿಜೆಪಿ ಮುಖ್ಯ ಸಚೇತನ ಆಯ್ಕೆ ಮಾಡಲಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ವಿಪಕ್ಷದ ಮುಖ್ಯ ಸಚೇತರ ಆಯ್ಕೆಯಾಗಬೇಕಾಗಿದೆ. ಸುವರ್ಣ ವಿಧಾನಸೌಧದಲ್ಲಿ ಈ ಪ್ರಕ್ರಿಯೆ ಮಾಡುತ್ತೇವೆ. ಕಿತ್ತೂರು ಕರ್ನಾಟಕ ಅಥವಾ ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ಶಾಸಕರೊಬ್ಬರು ಮುಖ್ಯ ಸಚೇತಕರಾಗಲಿದ್ದಾರೆ ಎಂದಿದ್ದಾರೆ.


