ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿ ಅಧಿಕೃತ ವಿಪಕ್ಷವಾಗಿ ಕಾರ್ಯನಿರ್ವಹಣೆ ಮಾಡಬೇಕಿದ್ದು, ಇದಕ್ಕಾಗಿ ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಬಿಜೆಪಿಗೆ ನೂತನ ಶಾಸಕಾಂಗ ಪಕ್ಷದ ನಾಯಲನ ಆಯ್ಕೆಯಾಗಬೇಕಿದ್ದು, ಇದಕ್ಕಾಗಿ ಭಾನುವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಭಾನುವಾರ ರಾಜ್ಯ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ, ಎಲ್ಲಾ ಶಾಸಕರುಗಳು ಉಪಸ್ಥಿತರಿರಲಿದ್ದು, ಅಂದೇ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


