ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಬಗೆ, ಜುಲೈ 3ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನ ಮತ್ತಿತರ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಇದರ ಜತೆಗೆ ಮುಖ್ಯವಾಗಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನ ಸಭೆ ಚುನಾವಣೆಯಲ್ಲಿ ದಯನೀಯ ಸೋಲನು ಭವಿಸಿರುವ ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೂ ತಿಣುಕಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


