ಬಿಜೆಪಿಯ ಶಾಸಕರಾದರೂ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಳ್ಳುತ್ತ ಸುದ್ದಿಯಾಗುವ, ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು, ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಈ ಹಿಂದೆಯೂ ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್, ಕೆಂಗೇರಿ ಉಪನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದರು. ಈ ಮೂಲಕ ಅವರು ನನ್ನ ಬೆಂಬಲ ಕಾಂಗ್ರೆಸ್’ಗೆ ಎಂದು ಘೋಷಿಸಿದ್ದಾರೆ.
ಬಿಜೆಪಿ(BJP)ಯವರ ಕೈಯಲ್ಲಿ ಏನ್ ಮಾಡೋಕಾಗುತ್ತೋ ಮಾಡಿಕೊಳ್ಳಲಿ, ನಾನು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ ಎಂದು ಬಹಿರಂಗವಾಗಿಯೇ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಅದಲ್ಲದೇ ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ತೀವ್ರ ವಿರೋಧವನ್ನು ಕೂಡ ಎಸ್‌ಟಿ ಸೋಮಶೇಖರ್ ವ್ಯಕ್ತಪಡಿಸಿದ್ದು, ಜನರಿಂದ ಗೋಬ್ಯಾಕ್ ಅನಿಸಿಕೊಂಡು ಬಂದವರಿಗೆ ನಾವು ಸ್ವಾಗತ ಕೋರಬೇಕಾ ಎಂದು ಪ್ರಶ್ನಿಸಿದ್ದಾರೆ.
ಸಭೆ ಬಳಿಕ ಮಾತಾಡಿದ ಎಸ್ ಟಿ ಎಸ್, ಬಿಜೆಪಿಯಿಂದ (BJP) ಲೋಕಸಭೆ ಅಭ್ಯರ್ಥಿ ಘೋಷಣೆಯಾದರೂ, ಇದುವರೆಗೂ ಬಿಜೆಪಿಯ ಯಾರೊಬ್ಬರೂ ನನ್ನ ಬೆಂಬಲ ಕೇಳಿಲ್ಲ. ನನ್ನ ಕ್ಷೇತ್ರದಲ್ಲಿ 7-8 ಬಾರಿ ಪ್ರಚಾರ ಮಾಡಿದ್ದಾರೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಹೀಗಾಗಿ ನನ್ನ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಇಷ್ಟೆಲ್ಲಾ ಆದ ಮೇಲೆ ಸುಮ್ಮನೆ ಇದ್ದರೆ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತೆ. ನನ್ನ ಕ್ಷೇತ್ರಕ್ಕೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296