ತುಮಕೂರು: ಕೆಡಿಪಿ ಸಭೆ ಎಂದು ಕರೆದು ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಕುರಿತು ಸಭೆ ಮಾಡಲಾಗುತ್ತಿದೆ ಎಂದು ಆರೋಪಿಸಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ ಗೌಡ ಇಂದು ನಡೆದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.
ಅಲ್ಲದೆ ಈ ಸಂದರ್ಭದಲ್ಲಿ ಸುರೇಶ್ ಗೌಡ ಲಿಂಕ್ ಕೆನಾಲ್ ಯೋಜನೆ ಅನುಷ್ಠಾನ ಕುರಿತು ಚರ್ಚಿಸಲು ಮುಂದಾದಾಗ ಇದಕ್ಕೆ ಸಚಿವ ಪರಮೇಶ್ವರ್ ಅವಕಾಶ ನೀಡಲಿಲ್ಲ. ಅಲ್ಲದೆ ಸಭೆಯ ಕೊನೆಯ ಭಾಗದಲ್ಲಿ ಇದನ್ನು ಚರ್ಚಿಸುವ ಬಗ್ಗೆ ಸಲಹೆ ನೀಡಿದರು.
ಇದರಿಂದ ಸಿಟ್ಟಿಗೆದ್ದ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ದಾಖಲೆಗಳನ್ನು ಟೇಬಲ್ ಮೇಲೆ ಬಿಟ್ಟು ಸಭೆಯಿಂದ ಹೊರ ನಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4