ವಿಜಯಪುರ: ಬಿಜೆಪಿ ಶಾಸಕ ಮುನಿರತ್ನ ಆಡಿಯೋ ವೈರಲ್ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನಕಲಿ ಆಡಿಯೋಗಳನ್ನು ಸೃಷ್ಟಿಸುತ್ತಾರೆ. ಹಾಸ್ಯ ಕಲಾವಿದನೊಬ್ಬನಿದ್ದಾನೆ. ಎಷ್ಟು ಚೆಂದ ಮಿಮಿಕ್ರಿ ಮಾಡ್ತಾರೆ….ಎಂದಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರು ಬೇಕಾಗಿದ್ದಾರೆ. ಯಾದಗಿರಿಯಲ್ಲಿ ಪಿಎಸ್ ಐ ಆತ್ಮಹತ್ಯೆಯಾಯ್ತು. ದಲಿತ ಸಂಘಟನೆಗಳು ಎಲ್ಲಿದ್ದಾವೆ? ಕೆಲ ಮುಖಂಡರು ಪೇಯ್ಡ್ ಸರ್ವೆಂಟ್ ಇದ್ದಾರೆ ಎಂದರು.
ಪೇಟಿಎಂ ಇದ್ದಂತೆ ಹಣ ಹಾಕಿದ ಕೂಡಲೇ ಕೆಲ ಸಂಘಟನೆಗಳು ಮಾತನಾಡುತ್ತವೆ. ಹಣ ಕಡಿಮೆಯಾಯ್ತು ಎಂದರೆ ಕಾಂಗ್ರೆಸ್ ವಿರುದ್ಧ ಮಾತನಾಡುತ್ತವೆ. ರಾತ್ರಿ ಪೇಮೆಂಟ್ ಆಯ್ತು ಎಂದರೆ ಹೋರಾಟ ಹಿಂಪಡೆಯಲಾಯ್ತು ಅಂತಾರೆ ಎಂದು ಕಿಡಿಕಾರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


