ಬಿಜೆಪಿ ಎಂಎಲ್ ಸಿ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ನಿಶಾ ಅವರು ಕಾಂಗ್ರೆಸ್ ಸೇರಲು ತನ್ನ ತಂದೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿಕೊಂಡಿದ್ದಾರೆ.
ಈ ಹಿಂದೆ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಗುಮಾನಿ ಹಬ್ಬಿತ್ತು. ಆದರೆ ಈಗ ಸ್ವತಃ ನಿಶಾ ಯೋಗೇಶ್ವರ ಅವರೇ ಕಾಂಗ್ರೆಸ್ ಸೇರುವುದಾಗಿ ಹೇಳಿಕೊಂಡಿದ್ದಾರೆ.
ನಾನು ಕಾಂಗ್ರೆಸ್ ಸೇರುವುದರ ಬಗ್ಗೆ ತಂದೆಯವರಿಗೆ ಯಾವುದೇ ಆಕ್ಷೇಪವಿಲ್ಲ, ಅವರ ಸಂಪೂರ್ಣ ಬೆಂಬಲ ನನಗಿದೆ. ತಂದೆ ಚಿಕ್ಕವಯಸ್ಸಿನಿಂದಲೂ ನನಗೆ ಸಂಪೂರ್ಣ ಸ್ವತಂತ್ರ ನೀಡಿದ್ದಾರೆ ಎಂದು ನಿಶಾ ಅವರು ತಿಳಿಸಿದ್ದಾರೆ.
ನಿಶಾ ಅವರ ನಿರ್ಧಾರವು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಡಿ.ಕೆ. ಸುರೇಶ್ ಗೆ ಹೆಚ್ಚಿನ ಮತಗಳನ್ನು ಪಡೆಯಲು ಸಹಾಯ ಮಾಡುತ್ತದೆ. ನಿಶಾ ಅವರು ಸುರೇಶ್ ಮತ್ತು ಕೆಪಿಸಿಸಿ ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜಯಗಳಿಸಿದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ತೆರವಾಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296