ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಎಂಟು ಮಹಿಳೆಯರು ಸೇರಿದಂತೆ 189 ಮಂದಿ ಪಟ್ಟಿಯಲ್ಲಿದ್ದಾರೆ.
ಅವರಲ್ಲಿ 52 ಮಂದಿ ಹೊಸಬರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಲಿ ಕ್ಷೇತ್ರ ಶಿಗಾಂವದಿಂದ ಸ್ಪರ್ಧಿಸಲಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಸಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಆರ್.ಅಶೋಕ ಸ್ಪರ್ಧಿಸಿದ್ದಾರೆ.
ವರುಣಾದಲ್ಲಿ ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಲಿದ್ದಾರೆ. ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕರ್ನಾಟಕ ಸಚಿವ ಡಾ. ಅಶ್ವಥ್ ನಾರಾಯಣ ಸಿಎನ್ ಮಲ್ಲೇಶ್ವರಂ ಮತ್ತು ಸಚಿವ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್ ಕಂಪ್ಲಿಯಿಂದ ಸ್ಪರ್ಧಿಸಲಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಳ್ಳಾರಿ ಗ್ರಾಮಾಂತರದಿಂದ ಸಚಿವ ಬಿ.ಶ್ರೀರಾಮುಲು ಹಾಗೂ ಗೋಕಾಕ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ. ಮೇ 10 ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


