ಉತ್ತರ ಪ್ರದೇಶದ ಹತ್ರಾಸ್ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ರಾಜವೀರ್ ದಿಲೇರ್ ಅವರು ಹೃದಯಾಘಾತದಿಂದ ನೆನ್ನೆ ನಿಧನರಾಗಿದ್ದಾರೆ. ದೊರೆತ ಮಾಹಿತಿ ಪ್ರಕಾರ ಸಂಸದ ರಾಜವೀರ್ ದಿಲೇರ್ ಅವರು ಅಲಿಘರ್ ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೂ ಕಾಲ ಮೀರಿತ್ತು. ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಂದಹಾಗೆ, ರಾಜವೀರ್ ದಿಲೇರ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಬಿಜೆಪಿ ಟಿಕೆಟ್ ಕೊಡಲು ನಿರಾಕರಿಸಿತ್ತು. ಸಂಸದರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296