ಪಶ್ಚಿಮ ಬಂಗಾಳ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದನ್ನು ಖಂಡಿಸಿರುವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಅವರು ಹೇಳಿದರು.
ಬಿಜೆಪಿ ಆಡಳಿತದಲ್ಲಿ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ ನಿರ್ಮಾಣವಾಗಿದೆ . ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲಾಗುತ್ತಿಲ್ಲ. ಯಾಕೆಂದರೆ ಅವುಗಳಿಗೆ ಸ್ವಾಯತ್ತೆ ಇಲ್ಲ. ಸ್ವಾಯತ್ತೆ ಎಂಬುದು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿದೆ. ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5