nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರ, ಸ್ಪೀಕರ್ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ದೂರು
    ರಾಜ್ಯ ಸುದ್ದಿ July 21, 2023

    ಸರ್ಕಾರ, ಸ್ಪೀಕರ್ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ದೂರು

    By adminJuly 21, 2023No Comments2 Mins Read
    basavaraja bommayi

    ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

    ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ.


    Provided by
    Provided by

    ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಳಗನ್ನು ಕಳುಹಿಸಿದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿದರು. ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದೆ. ಸ್ಪೀಕರ್ ಅವರು ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆ ಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ.

    ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಅಂತ ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಅಂತ ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ. ಈ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.

    ರಾಜ್ಯದಲ್ಲಿ ಟೆರೆರಿಸ್ಟ್ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂತಾರಾಷ್ಟ್ರೀಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಅಂತ ನಾವು ಆಗ್ರಹಿಸಿದ್ದೇವೆ. ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು.

    ನಮ್ಮ ಸದಸ್ಯರನ್ನು ಅಮಾನತು ಮಾಡಿರುವುದರಿಂದ ನಾವು ಸದನವನ್ನು ಬಹಿಷ್ಕರಿಸುತ್ತೇವೆ. ಈ ಪ್ರಕರಣವನ್ನು ಜಿಲ್ಲಾ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.