ತುಮಕೂರು: ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಟ್ಟ ಕಾಂಗ್ರೆಸ್ ಸರ್ಕಾರವಿದ್ದು ಅದ್ರ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ಇಂದು ಮುಖ್ಯವಾಗಿ ಮೂರು ಪ್ರಮುಖ ಅಂಶಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಲಾಗಿದೆ ಅದರಲ್ಲಿ ಅಲ್ಪಸಂಖ್ಯಾತರಿಗೆ ಕರ್ನಾಟಕ ರಾಜ್ಯದಲ್ಲಿ ಗುತ್ತಿಗೆ ನೀಡುವ ವಿಚಾರದಲ್ಲಿ ನಾಲ್ಕು ಪರ್ಸೆಂಟ್ ಮೀಸಲಾತಿ ಕಲ್ಪಿಸುವುದನ್ನು ವಿರೋಧಿಸಲಾಗಿದೆ.
ಅಲ್ಲದೆ ಬುಡಕಟ್ಟು ಹಾಗೂ ದಲಿತ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಸರ್ಕಾರ ವರ್ಗಾವಣೆ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4