ಪಾವಗಡ: ತಾಲ್ಲೂಕಿನ ಬಿಜೆಪಿ ಘಟಕದ ವತಿಯಿಂದ ಈ ದಿನ ರಾಜ್ಯ ಸರ್ಕಾರದ ಬೆಲೆ ಏರಿಕೆ ಕ್ರಮವನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಿಲ್ಲೊಂದು ರೀತಿಯಲ್ಲಿ ದಿನ ಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದ್ದು ಇದರಿಂದ ಜನ ಸಾಮಾನ್ಯರಿಗೆ ತುಂಬಾ ತೊಂದರೆಯಾಗುತಿದೆ ಎಂದು ತಾಲ್ಲೂಕು ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿತು.
ಬೆಲೆ ಏರಿಕೆ ಕ್ರಮವನ್ನು ಪರಿಶೀಲಿಸಿ ಕೂಡಲೇ ರದ್ದುಪಡಿಸಬೇಕು ಎಂದು ತಾಲ್ಲೂಕು ಆಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡಲಾಯಿತು.
ಈ ವೇಳೆ ಮಾತನಾಡಿದ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ರವರು ರಾಜ್ಯಸರ್ಕಾರ ಇದೆ ರೀತಿ ಅಭಿವೃದ್ಧಿ ಮಾಡದೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿರಂತರವಾಗಿ ಮಾಡಿದರೆ ಜನರೆ ನಿಮಗೆ ಉತ್ತರ ಕೊಡುತ್ತಾರೆ. ಹಾಗಾಗಿ ಕೂಡಲೇ ಏರಿಕೆ ಮಾಡಿರುವ ವಿದ್ಯುತ್, ಹಾಲಿನ ಬೆಲೆ, ಡಿಸೇಲ್ , ಬಸ್ ಟಿಕೇಟ್ ದರ ಎಲ್ಲವನ್ನು ಕೂಡಲೇ ರದ್ದು ಮಾಡಿ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕಾಗಿ ತಹಶೀಲ್ದಾರ್ ರವರಿಗೆ ಮನವಿ ಕೊಡುವ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕಿನ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ತಾಲ್ಲೂಕು ಪ್ರವಾಸಿಮಂದಿರದಿಂದ ಅಂಬೇಡ್ಕರ್ ಸರ್ಕಲ್ ಮೂಲಕ ಶನಿ ಮಹಾತ್ಮ ದೇವಸ್ಥಾನದ ಸರ್ಕಲ್ ಬಳಿವರೆಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗುತ್ತ ಬೆಲೆ ಏರಿಕೆ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಡಾ.ವೆಂಕಟರಾಮಯ್ಯ, ರವಿ, ಮುರಳಿ, ಹನುಮಂತರೆಡ್ಡಿ, ಸಿದ್ದಾಪುರ ರಾಮಕೃಷ್ಣ, ಬಿ.ಹೊಸಹಳ್ಳಿ ಪ್ರಸಾದ್ ಬಾಬು, ಇನ್ನು ಮುಂತಾದ ಕಾರ್ಯಕರ್ತರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW