ಭಾರತ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ಹೆಸರು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದು, ಸಂಭಾವ್ಯ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಲವು ಘಟಾನುಘಟಿಗಳ ಜೊತೆ ರವೀಂದ್ರ ಜಡೇಜಾ ಅವರ ಪತ್ನಿ ಕೂಡ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ.
ಜಡೇಜಾ ಪತ್ನಿ ರಿವಾಬಾ ಜಡೇಜಾ ಮೆಕಾನಿಕಲ್ ಇಂಜಿನಿಯರ್ ವಿದ್ಯಾಭ್ಯಾಸ ಮಾಡಿದ್ದು, ರಿವಾಬಾ ಅವರ ಸಂಬಂಧಿ ಹರಿ ಸಿಂಗ್ ಸೋಲಾಂಕಿ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದಾರೆ.
ಕರ್ಣಿಸೇನಾ ಮುಖಂಡರಲ್ಲಿ ಒಬ್ಬರಾಗಿರುವ ರಿವಾಬಾ ಜಡೇಜಾ ರಜಪುತ್ ಸಮುದಾಯದವರಾಗಿದ್ದಾರೆ. ರವೀಂದ್ರ ಜಡೇಜಾ ಅವರನ್ನು 2016ರಲ್ಲಿ ವಿವಾಹ ಆಗಿದ್ದಾರೆ.
ಗುಜರಾತ್ ನಲ್ಲಿ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ ತವರೂರಾದ ಈ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿಗೆ ಪ್ರಮುಖವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy