ತುಮಕೂರು: ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ. ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.
ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ. ಇದು ಕರ್ನಾಟಕದಲ್ಲಿ ಈವರೆಗೆ ಕಂಡಿರುವ ಒಬ್ಬ ಧೀಮಂತ ಮುಖ್ಯಮಂತ್ರಿ ಎಂಬುದು ಸಾಬೀತಾಗಿದೆ ಎಂದರು.
ಹಿಂದಿನ ಸರ್ಕಾರಗಳು ಕೇವಲ ಘೋಷಣೆಗಳಿಗಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದರು. ಆದರೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರ ಪರ ಎಂಬುದು ಜನರ ಅರಿವಿಗೆ ಬರುವಂತಾಗಿದೆ. ರಾಜ್ಯದಲ್ಲಿ ಒಟ್ಟು 10 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ಇತಿಹಾಸದಲ್ಲಿ ಮೊಟ್ಟ ಮೊದಲಬಾರಿಗೆ ಐತಿಹಾಸಿಕ ನಿರ್ಧಾರ ಇದಾಗಿದೆ . ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಪ್ರಾಮಾಣಿಕ ಹೆಜ್ಜೆಯನ್ನು ಬಿಜೆಪಿ ನೇತೃತ್ವದ ಸರ್ಕಾರ ಇಡುವ ಮೂಲಕ ಸಾಕಷ್ಟು ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಮುಂದಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಾಧ್ಯಮ ಸಂಚಾಲಕರಾದ ಶಿವಕುಮಾರ್, ಕೊಪ್ಪಳ ನಾಗರಾಜ್ ಹಾಜರಿದ್ದರು.
ವರದಿ: ರಾಜೇಶ್ ರಂಗನಾಥ್, ತುಮಕೂರು