nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 3 ಕೋಟಿಯ ಇದ್ದದ್ದನ್ನು 12 ಸಾವಿರ ಕೋಟಿ ರೂ. ಗೆ ಏರಿಸಿ ಬಿಜೆಪಿ ಸರ್ಕಾರದಿಂದ ಲೂಟಿ;ಹೆಚ್.ವಿಶ್ವನಾಥ್
    ರಾಜ್ಯ ಸುದ್ದಿ March 14, 2023

    3 ಕೋಟಿಯ ಇದ್ದದ್ದನ್ನು 12 ಸಾವಿರ ಕೋಟಿ ರೂ. ಗೆ ಏರಿಸಿ ಬಿಜೆಪಿ ಸರ್ಕಾರದಿಂದ ಲೂಟಿ;ಹೆಚ್.ವಿಶ್ವನಾಥ್

    By adminMarch 14, 2023No Comments3 Mins Read
    h vishwanath

    ಬೆಂಗಳೂರು ಮೈಸೂರು ದಶಪಥ ರಸ್ತೆ ನಿರ್ಮಾಣದ ಬಗ್ಗೆ ಕ್ರೆಡಿಟ್ ವಾರ್ ಮುಂದುವರೆದಿದ್ದು, ಈ ಸಂಬಂಧ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಕಾಂಗ್ರೆಸ್ ಪರ ಬ್ಯಾಟ್ ಬೀಸಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ನಿಮ್ಮ ಮೂಲಕ ತಿಳಿಸುವ ಪ್ರಯತ್ನವಾಗಬೇಕು. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. 2014 ರಲ್ಲಿ ನಾನು, ಧ್ರುವನಾರಾಯಣ್ ಎಂಪಿ ಆಗಿದ್ದ ಮೊದಲು ಇದು 4 ಪಥದ ರಸ್ತೆಯನ್ನು ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಇವರು ನಾವು ಮಾಡಿಸಿದ್ದು ಅಂತ ಬೊಗಳೆ ಹೊಡೆಯುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ.? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದು ಬಿಜೆಪಿ ನಾಯಕರಿಗೆ ಖಡಕ್ ತಿರುಗೇಟು ನೀಡಿದರು.


    Provided by
    Provided by

    ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ದಿಲಿಪ್ ಕನ್ಸ್ಟ್ರಕ್ಸನ್ ಕಡೆಯಿಂದ ಆಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60 % ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ. ಇದೊಂದು ಅವೈಜ್ಞಾನಿಕ ರಸ್ತೆಯಾಗಿದೆ. ಸರ್ವಿಸ್ ರಸ್ತೆ ಇನ್ನೂ ಮಾಡಿಲ್ಲ ಆಗಲೇ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಅರೆಬರೆ ಕಾಮಗಾರಿ ಆಗಿದ್ರು ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ. ಏನು ಅರ್ಜೆಂಟಿದೆ.? ಎಲ್ಲಾ ಕೆಲಸ ಮುಗಿಸಿ ಸಂಗ್ರಹ ಮಾಡಲಿ. ಇದು ಒಂದು ರೀತಿ ಜನರ ಹಣವನ್ನು ಲೂಟಿ ಮಾಡುತ್ತಿದೆ. 3 ಕೋಟಿಯ ಇದ್ದದ್ದನ್ನು 12 ಸಾವಿರ ಕೋಟಿ ರೂ. ಗೆ ಏರಿಸಿ ಬಿಜೆಪಿ ಸರ್ಕಾರ ಲೂಟಿ ಮಾಡಲು ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದರು.

    ರಸ್ತೆ ಮಧ್ಯ ನೂರಾರು ಹೋಟೆಲ್ ಬಾಗಿಲು ಹಾಕುತ್ತಿದ್ದಾವೆ. ಪೆಟ್ರೋಲ್ ಬಂಕ್ ಗಳು ಮುಚ್ಚಿಹೋಗುತ್ತಿವೆ. ಜನರ ಬದುಕಿನ‌ ಜೊತೆ ಮೋದಿ ಸರ್ಕಾರ ಆಟ  ಆಡುತ್ತಿದೆ. ಸಂಸದ ಪ್ರತಾಪ್ ಸಿಂಹಗೆ ಕಮಿಷನ್ ಎಷ್ಟು ಸಿಕ್ಕಿದೆ ತಿಳಿಸಬೇಕು. ಇದೇ ಮಾರ್ಚ್ 17 ರಂದು ಸಾಂಕೇತಿಕವಾಗಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಸರ್ಕಲ್ ಬಳಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದೇನೆ ಎಂದು ಹೇಳುವ ಮೂಲಕ ಬಿಜೆಪಿ ನಡೆ ವಿರುದ್ಧ ಎಚ್ ವಿಶ್ವನಾಥ್ ಪ್ರತಿಭಟನೆಗೆ ಕರೆ ಕೊಟ್ಟರು.

    1 ಕಿ.ಮೀ 1 ರೂ. ಟೋಲ್ ತೆಗೆದುಕೊಳ್ಳಿ. 118 ಕಿ.ಮೀ ಗೆ 118 ರೂ ತೆಗೆದುಕೊಳ್ಳಿ. ಎರಡೂ ಕಡೆಯಿಂದ ಈಗ ಸುಮಾರು 600 ರೂ. ಆಗುತ್ತೆ ಇದು ಸರಿಯಲ್ಲ. ಅರ್ಧ ಉದ್ಘಾಟನೆ ಅಷ್ಟೇ ಆಗಿರೋದು. ಇನ್ನೂ ಸಂಪೂರ್ಣವಾಗಿ ಕಾಮಗಾರಿ ಪೂರ್ಣವಾಗಿಯೇ ಇಲ್ಲ. ಇನ್ನೆಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳ್ತೀರಾ ಮಂಡ್ಯಕ್ಕೆ ಬಂದಾಗ ಇಲ್ಲಿ ಧ್ರುವನಾರಾಯಣ್ ಸಾವಾಗಿದ್ದರೂ ಸೌಜನ್ಯಕ್ಕಾದರೂ ಅವರ ಹೆಸರು ಪ್ರಸ್ತಾಪ ಮಾಡಲಿಲ್ಲ. ಅದ್ಯಾವುದೋ ಉರಿಗೌಡ, ನಂಜೇಗೌಡರ ಹೆಸರು ಹೇಳ್ಕೊಂಡು ಭಾವನಾತ್ಮಕ ವಿಚಾರ ತಂದು ಮತಬೇಟೆ ಕೆಲಸ ಮಾಡುತ್ತಿದೆ ಥೂ ನಿಮ್ಮ ಯೋಗ್ಯತೆಗೆ ಎಂದು ಬಿಜೆಪಿ ಸರ್ಕಾರ ಮತ್ತು ಬೊಮ್ಮಾಯಿ ವಿರುದ್ಧ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

    ಹಾಗೆಯೇ ಆರ್. ಧೃವನಾರಾಯಣ್ ನಿಧನದ ಬಗ್ಗೆ ಮಾತನಾಡಿದ ಹೆಚ್.ವಿಶ್ವನಾಥ್, ನಮ್ಮನ್ನಗಲಿದ ಧ್ರುವನಾರಾಯಣ್ ನಾನು ಅವರು ಒಟ್ಟಿಗೆ ಸಂಸತ್ ಪ್ರವೇಶ ಮಾಡಿದೆವು. ಧೃವನಾರಾಯಣ್, ಬಹಳ ಕ್ರಿಯಾಶೀಲ ವ್ಯಕ್ತಿ. ಸಂಸದರಾಗಿ ಉತ್ತಮ ಕೆಲಸ ಮಾಡಿದ್ದವರು. ಅದರಲ್ಲೂ ಶಿಕ್ಷಣ, ಆರೋಗ್ಯ, ರಸ್ತೆಗಳ ಅಭಿವೃದ್ಧಿ ಮಾಡುವಲ್ಲಿ ಉತ್ತಮ ಕೆಲಸ ಮಾಡಿದ್ದರು.

    ಚಾಮರಾಜನಗರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದವರು. ಕಳೆದ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಿ ಸೋತರು ಛಲಬಿಡದ ನಾಯಕನಾಗಿ ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಈಗ ಅವರ ನಿಧನದ ಬಳಿಕ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ. ನಂಜನಗೂಡಿನಿಂದ ಟಿಕೆಟ್ ಗೆ ಒತ್ತಾಯ ಕೇಳಿ ಬಂದಿದೆ. ಇದನ್ನ ಪಕ್ಷದ ವರಿಷ್ಠರು ಮಾನ್ಯ ಮಾಡಬೇಕು. ನಂಜನಗೂಡಿಗೆ ಧ್ರುವನಾರಾಯಣ್ ಪುತ್ರನಿಗೆ ಟಿಕೆಟ್ ಕೊಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಎಚ್ ವಿಶ್ವನಾಥ್ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.