ತಿಪಟೂರು: ನಗರದ ಸರ್ಕಾರಿ ನೌಕರ ಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ಭಾರತ್ ಜೋ ಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ ಅವರು ಉದ್ದೇಶಿಸಿ ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನತೆ ತೀರ್ಮಾನಿಸಿದ್ದಾರೆ. ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬರುವ ಮೊದಲು ನೀಡಿದ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ಅವರು ಆರೋಪಿಸಿದರು.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ, ಇರುವ ಉದ್ಯೋಗಗಳನ್ನು ಕಿತ್ತು ಹಾಕುತ್ತಿದೆ. ಅಂಬಾನಿ ಅದಾನಿಯವರಿಗೆ ಬಿಜೆಪಿ ಸಹಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ನಡೆಸಲಿ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮರಿ ಚೆನ್ನಮ್ಮ ತಾಲ್ಲೂಕು ಅಧ್ಯಕ್ಷ ಕಾಂತರಾಜು, ನೇಕೇನಹಳ್ಳಿ ಸುರೇಶ್, ಆರ್. ಡಿ.ಬಾಬು, ಟಿ.ಎನ್. ಪ್ರಕಾಶ್ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು, ನಗರಸಭಾ ಸದಸ್ಯರು, ಮಹಿಳಾ ಸದಸ್ಯರು ಭಾಗವಹಿಸಿದ್ದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz