ತುಮಕೂರು: ಜಿಲ್ಲಾ ಬಿ.ಜೆ.ಪಿ ಎಸ್.ಸಿ ಮೋರ್ಚಾದ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 115 ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಡಾ.ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಜ್ಯೋತಿಗಣೇಶ್, ಬಾಬೂ ಜಗಜೀವನ್ ರಾಮ್ ರವರು ಹಸಿರು ಕ್ರಾಂತಿಯ ಹರಿಕಾರರೆಂದೇ ಪ್ರಖ್ಯಾತರಾದವರು, ದೇಶಕ್ಕೆ ಅಪಾರವಾದ ಕೊಡುಗೆ ನೀಡಿದವರು’ ಎಂದರು.
ಎಸ್.ಸಿ.ಮೋರ್ಚ ಜಿಲ್ಲಾಧ್ಯಕ್ಷರಾದ ಓಂಕಾರ್ ಮಾತನಾಡಿ, ‘ದಲಿತ ಸಮುದಾಯಗಳ ಏಳಿಗೆಗೆ ಶ್ರಮಿಸಿದ ಮಹಾನಾಯಕರಾದ ಡಾ.ಬಾಬೂಜೀ ರವರ ಜಯಂತಿ ಆಚರಣೆಗಷ್ಟೆ ಸೀಮಿತವಾಗಬಾರದು, ಅವರ ಆದರ್ಶಗಳನ್ನು ನಮ್ಮ ಕಾರ್ಯಕರ್ತರು ಪಾಲಿಸಬೇಕು. ದಲಿತ ಸಮುದಾಯದ ಬಡ ವ್ಯಕ್ತಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡಬೇಕಾಗಿದೆ ಎಂದರು.
ಬಾಬೂಜೀ ರವರು ರಾಷ್ಟçದ ಸಂಕಷ್ಟದ ಪರಿಸ್ಥಿತಿಗಳಲ್ಲಿ ರಕ್ಷಣಾ ಖಾತೆ, ಕೃಷಿ, ಕಾರ್ಮಿಕ ಅನೇಕ ಪ್ರಮುಖ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದವರು, ಪ್ರಧಾನಿಯಾಗುವ ಎಲ್ಲಾ ಅರ್ಹತೆ ಅವಕಾಶಗಳಿದ್ದರೂ ಅವರು ಪ್ರಧಾನಿ ಆಗದೇ ಇದ್ದದ್ದು ದೌರ್ಭಾಗ್ಯ’ ಎಂದರು.
ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷರಾದ ಅಂಬಿಕಾ ಹುಲಿನಾಯ್ಕರ್, ಎಸ್.ಸಿ ಮೋರ್ಚದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ, ನಗರಾಧ್ಯಕ್ಷರಾದ ವರದಯ್ಯ, ಮುಖಂಡರಾದ ಮಂಜುನಾಥ್, ಅಂಜನಮೂರ್ತಿ, ಸುಶೀಲ್, ಹನುಮಂತರಾಯಪ್ಪ ಅನೇಕರು ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5