ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹೂವಪ್ಪಗೌಡ ಎಂಬಾತನಿಂದ ಎಂ.ಪಿ.ಕುಮಾರಸ್ವಾಮಿ ಅವರು 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು.
ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಕಾರಣದಿಂದಾಗಿ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು.
ನ್ಯಾಯಮೂರ್ತಿ ಜೆ.ಪ್ರೀತ್ ಪ್ರಕರಣದ ವಿಚಾರಣೆ ನಡೆಸಿ, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy