ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಳೆದ ಎರಡು ಮೂರು ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ಭರವಸೆ ನೀಡುತ್ತಿದ್ದಾರೆ. ಹತಾಶೆಯಿಂದ ನಮ್ಮ ಪಕ್ಷದವರನ್ನು ಸಂಪರ್ಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಇದೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯಿಂದ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಎಸ್ ಡಿಪಿಐನವರು ನನನ್ನು ಹೊಗಳಲು ಸಾಧ್ಯನಾ? ಎಸ್ ಡಿಪಿಐ ಒಂದು ದೇಶದ್ರೋಹಿ ಸಂಘಟನೆ. ಅವರು ದೇಶದ ವಿರುದ್ಧ ಚಟುವಟಿಕೆ ಮಾಡುವವರು. ಭಾರತದ ದೇಶದ ಅಲ್ಪಸಂಖ್ಯಾತರ ವಿರೋಧಿಗಳೇ ಎಸ್ ಡಿಪಿಐ ನವರು. ಅವರಿಂದ ನಾನೇನು ಹೊಗಳಿಕೆ ಬಯಸಲ್ಲ. ಯಾವಾಗಲು ನಮ್ಮ ವಿರೋಧಿಗಳು ಇದ್ದಾರೆ. ಅವರ ಹೇಳಿಕೆಗೆ ಸೊಪ್ಪು ಹಾಕುವುದಿಲ್ಲ. ಖಂಡಿತವಾಗಿಯೂ ಕಾನೂನು ಕ್ರಮ ಆಗುತ್ತದೆ. ಜನ ತೀರ್ಮಾನ ಮಾಡುತ್ತಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


