ಬೆಂಗಳೂರು: ರನ್ಯಾರಾವ್ ಪ್ರಕರಣದ ತನಿಖೆ ಮುಗಿಯುವವರೆಗೆ ಬಿಜೆಪಿಯವರು ಕಾಯಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಪ್ರತಿಪಕ್ಷಗಳ ಆರೋಪಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಬಿಐ ತನಿಖೆ ನಡೆಯುತ್ತಿದೆ, ಕಾಯಬೇಕು. ಏರ್ ಪೋರ್ಟ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತೆ. ಅದು ಕೇಂದ್ರ ಸರ್ಕಾರದ ಜವಾಬ್ದಾರಿ. ಸಚಿವರ ಬಗ್ಗೆ ಮಾತನಾಡಿದರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ ಎಂದು ಸವಾಲು ಹಾಕಿದರು.
ಕೆಪಿಸಿಸಿ ಅಧ್ಯಕ್ಷರ ಡಿನ್ನರ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರು ಡಿನ್ನರ್ಗೆ ಕರೆದಿದ್ದಾರೆ, ಹೋಗುತ್ತೇನೆ. ಹೋಗಲು ಬೇಕಾಗುತ್ತದೆ. ಅವರು ಪಾರ್ಟಿ ಹೆಸರಲ್ಲಿ ಡಿನ್ನರ್ ಕೊಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4