ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು.
ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇವರೊಂದಿಗೆ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು.
ಇದೇ ವೇಳೆ ಪತ್ರಕರ್ತರ ಬಗ್ಗೆ ಮಾತನಾಡಿದ ಬಿ ವೈ ವಿಜಯೇಂದ್ರ,ಇಂದು ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಮರಣೆಯಾಗಿದೆ, ಕೋಟ್ಯಂತರ ಭಕ್ತರಿಗೆ ಹರಸಿ ಹಾರೈಸಿದ ಶ್ರೀಗಳ ಈ ದಿನವನ್ನು ಮಾನ್ಯ ಯಡಿಯೂರಪ್ಪ ನವರು ದಾಸೋಹ ದಿನ ಎಂದು ಘೋಷಣೆ ಮಾಡಿದ್ದರು. ಆದರೆ ಈ ಸರ್ಕಾರ ಈ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದೆ. ಸರ್ಕಾರಕ್ಕೆ ಯಾವಾಗ ಬುದ್ದಿ ಬರತ್ತೋ ಆವಾಗ ದಾಸೋಹ ದಿನ ಅರ್ಥ ಪೂರ್ಣವಾಗಿ ಆಚರಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ.
ಜೊತೆಗೆ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ.ಮುಖ್ಯ ಮಂತ್ರಿಗಳು ಆದಷ್ಟು ಬೇಗ ಪುತ್ಥಳಿ ನಿರ್ಮಾಣ ಕಾರ್ಯ ಮುಗಿಸಲಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx