ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ ರೀನಾ ಸುವರ್ಣ ಅವರು ಸ್ವಾಮೀಜಿಗೆ ನೋಟಿಸ್ ಪ್ರತಿ ಕಳುಹಿಸಿದ್ದಾರೆ. ‘ನೋಟಿಸ್ ತಲುಪಿದ ನಂತರ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
ನಿಗದಿತ ದಿನದಂದು ವಿಚಾರಣೆಗೆ ಹಾಜರಾಗಬೇಕು. ಇಲ್ಲದಿದ್ದರೆ, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿವೆ.


