ಬೀದರ್: ತಾಲ್ಲೂಕಿನ ಬಗದಲ್ ಗ್ರಾಮದ 30ಕ್ಕೂ ಹೆಚ್ಚು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಜಿ ಶಾಸಕ ಅಶೋಕ ಖೇಣಿ ಅವರು ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.
ಕಾರ್ಯಕರ್ತರಿಗೆ ಸ್ಪಂದನೆ ದೊರಕದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇವೆ ಎಂದು ಮುಖಂಡ ಕಾರ್ತಿಕ ದೇಸಾಯಿ ಹೇಳಿದರು.
ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಮುಖಂಡರಾದ ಸಂತೋಷ ಪಾಟೀಲ, ಉದಯಕುಮಾರ ಚಟ್ನಳ್ಳಿ, ಆನಂದ ಕೆ, ವೈಜಿನಾಥ ಮೊದಲಾದವರು ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


