ರಾಜ್ಯ ಬಿಜೆಪಿಯಲ್ಲಿ ಸದ್ಯ ಸಂಘಟನಾತ್ಮಕವಾಗಿ ಕೆಲ ಹುದ್ದೆಗಳು ಭರ್ತಿಯಾಗಬೇಕಿದೆ. ಅತ್ತ ಕಾಂಗ್ರೆಸ್‌ನಲ್ಲಿ ಒಬ್ಬ ರಾಜ್ಯಾಧ್ಯಕ್ಷ, ಅವರ ಕೈ ಕೆಳಗೆ 5 ಕಾರ್ಯಾಧ್ಯಕ್ಷ ಹುದ್ದೆಯನ್ನು ನೇಮಕ ಮಾಡಲಾಗಿದೆ. ಆ ಮೂಲಕ ಹತ್ತಾರು ಮಂದಿಗೆ ಹುದ್ದೆ ಸೃಷ್ಟಿಸಿ ಅವಕಾಶ ನೀಡುತ್ತಾ, ಅವರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಮ್ಮಲ್ಲೂ ಕೂಡ ಅದೇ ರೀತಿ ಕಾರ್ಯಾಧ್ಯಕ್ಷ ಸ್ಥಾನ ನೇಮಕವಾಗಲಿ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಇಂದು ಮಾಧ್ಯಮಗಳ ಮುಂದೆ ವಿ. ಸೋಮಣ್ಣ, ರಾಜ್ಯ ಬಿಜೆಪಿ ಘಟಕದಲ್ಲಿ ಸಂಘಟನಾತ್ಮಕವಾಗಿ ಎರಡು ಕಾರ್ಯಾಧ್ಯಕ್ಷ ಸ್ಥಾನ ರಚನೆಯಾದ್ರೆ, ಒಳ್ಳೆಯದು ಎಂದು ಹೇಳುವ ಮೂಲಕ ಸಂಘಟನೆಗೆ ಬಲ ತುಂಬುವ ಮಾತುಗಳನ್ನು ಆಡಿದ್ದಾರೆ.
2024 ರ ಲೋಕಸಭಾ ಚುನಾವಣೆಗೆ ನನ್ನನ್ನು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎಂದರೆ ಅದನ್ನು ಮುಂದಕ್ಕೆ ನೋಡೋಣ. ಇನ್ನು ಸಾಕಷ್ಟು ಸಮಯವಿದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ವಿ. ಸೋಮಣ್ಣ, ಲೋಕಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದೆ. ಈಗಲೇ ಅದರ ಬಗ್ಗೆ ಮಾತನ್ನಾಡುವುದಿಲ್ಲ. ಎಲ್ಲವೂ ಕೂಡ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು ಎಂದಿದ್ದಾರೆ.


