ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಸಿ, ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ನೀಡಿದ ರಾಷ್ಟ್ರಹಿತದ ಕರೆಗೆ ಬಿಜೆಪಿಯೇತರ ರಾಜ್ಯ ಸರಕಾರಗಳು ಸ್ಪಂದಿಸುವ ಅವಕಾಶವನ್ನು ಕ್ಷುಲ್ಲಕ ರಾಜಕಾರಣಕ್ಕಾಗಿ ಕೈಚೆಲ್ಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಆರೋಪಿಸಿದರು.
ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಪ್ರತಿಪಕ್ಷಗಳು ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆ ಗಂಭೀರವಾಗಿಲ್ಲ. ಬದಲಿಗೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಅವು ಮುಳುಗಿವೆ ಎಂದು ಆರೋಪಿಸಿದರು.
ಕೋವಿಡ್ ಸಂಕಷ್ಟದ ನಡುವೆಯೂ ಮೋದಿಯವರು ಅಭಿವೃದ್ಧಿಪರ ರಾಜಕಾರಣಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ. ಹಿಂದೊಮ್ಮೆ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿತ್ತು. ಆಗ ಕರ್ನಾಟಕ ಸರಕಾರ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿ, ತನ್ನ ಜನಪರತೆಯನ್ನು ತೋರಿಸಿತ್ತು ಎಂದರು.
ದೇಶವು ಕಳೆದ ಎಂಟು ವರ್ಷಗಳಲ್ಲಿ ವಿಶ್ವದ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 10 ಟ್ರಿಲಿಯನ್ ಮೊತ್ತದ ಆರ್ಥಿಕತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದೆ. ಇದು ಕೆಲವೇ ವರ್ಷಗಳಲ್ಲಿ ಸಾಕಾರಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5