ತಿಪಟೂರು: ನಗರದ ಭಾರತೀಯ ಜನತಾ ಪಾರ್ಟಿ ಮಂಡಲದಲ್ಲಿ ಇಂದು ಎಸ್ ಸಿ ಮೋರ್ಚಾದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಪರಿನಿಬ್ಬಾಣ ದಿನವನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಎಸ್ಸಿ ಮೋರ್ಚಾದ ಅಧ್ಯಕ್ಷ ಮತ್ತಿಘಟ್ಟ ಅಶೋಕ್, ತಮ್ಮ ಜೀವನ ಉದ್ದಕ್ಕೂ ಅಸ್ಪೃಶತೆ, ಜಾತಿ ಪದ್ಧತಿ, ಅಸಮಾನತೆ ವಿರುದ್ಧ ಹೋರಾಡಿ ಶೋಷಿತ ಸಮುದಾಯದಗಳ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ, ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿ ಮಹಾಪರಿನಿಬ್ಬಾಣ ಹೊಂದಿದ ಈ ದಿನದಂದು, ಅವರಿಗೆ ನನ್ನ ಭಾವಪೂರ್ಣ ನಮನಗಳು ಎಂದರು.
ಉಪಾಧ್ಯಕ್ಷರಾದ ನರಸಿಂಹಮೂರ್ತಿ ಮಾತನಾಡಿ., ಅಂಬೇಡ್ಕರ್ ಅವರನ್ನು ವಿಶ್ವದ ಓರ್ವ ಮಾರ್ಗದರ್ಶಿಯನ್ನಾಗಿ ಸ್ವೀಕರಿಸಿ, ಅವರು ತೋರಿಸಿಕೊಟ್ಟ ಹಾದಿಯಲ್ಲಿ ಅವರ ಯೋಜನೆ ಮತ್ತು ದೂರದೃಷ್ಟಿಯನ್ನು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವದಡಿ ಸಮಾಜವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗಂಗರಾಜ್, ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಧನಂಜಯ್ ನಾಯ್ಕ ಸೇರಿದಂತೆ ಪ್ರಮುಖ ಬಿಜೆಪಿ ಮುಖಂಡರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700