ಮಧುಗಿರಿ: ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಿಳಿಸಿದರು.
ಪಟ್ಟಣದ ಎಂ.ಎಸ್.ರಾಮಯ್ಯ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಸಮಾವೇಶದ ಪೂರ್ವಭಾವಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ 27 ಮಂತ್ರಿ ಸ್ಥಾನ ನೀಡುವ ಮೂಲಕ ಹಿಂದುಳಿದ ಸಮುದಾಯ ಅಭಿವೃದ್ಧಿಗೆ ಮುಂದಾಗಿದೆ. ಅ.30ರಂದು ಕಲಬುರ್ಗಿಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಮಧುಗಿರಿ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಕಾರ್ಯಕರ್ತರು ಬಿಜೆಪಿ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.
ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಿ ಬೆಳೆಯುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ 3 ಕ್ಷೇತ್ರವನ್ನು ಗೆಲ್ಲಲು ಪಣ ತೊಡಲಾಗಿದೆ. ಇದಕ್ಕೆ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದರು.
ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಮಾತನಾಡಿ, ಹಿಂದೂಗಳನ್ನು ಅವಮಾನಿಸುವುದೇ ಕಾಂಗ್ರೆಸ್ ನಾಯಕರ ಬುದ್ಧಿ, ಅಧಿಕಾರಕ್ಕಾಗಿ ದೇಶದ ಹಿಂದೂಗಳನ್ನು ನಿರ್ಲಕ್ಷ ಮಾಡುವುದರ ಜೊತೆಯಲ್ಲಿ ಹಿಂದುಳಿದ ವರ್ಗಗಳನ್ನು ಕಡೆಗಣಿಸಿದ್ದ ಕಾಂಗ್ರೆಸ್ ಈಗ ಒಡೆದ ಬಿರುಕು ಬಿಟ್ಟ ಮನೆಯಾಗಿದೆ. ಅದನ್ನು ಸರಿಪಡಿಸಲು ಇಂದು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ ಕಾಂಗ್ರೆಸ್ ಜೋಡೋ ಕಾರ್ಯಕ್ರಮ ಎಂದ ಅವರು, ಮುಂದಿನ ಸಾರ್ವಜನಿಕ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ರಾಜ್ಯದ ಕಲಬುರ್ಗಿಯಲ್ಲಿ ಹಿಂದುಳಿದ ವರ್ಗದ ಬೃಹತ್ ಸಮಾವೇಶವನ್ನು ನಡೆಸಲು ಪಕ್ಷ ತೀರ್ಮಾನಿಸಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ವಿಧಾನಪರಿಷತ್ ಸದಸ್ಯ ಎಂ.ಚಿದಾನಂದ್ ಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ತತ್ವ ಸಿದ್ಧಾಂತದಿಂದ ಸದೃಢ ದೇಶವನ್ನು ಕಟ್ಟುತ್ತಿದ್ದು, ಇದಕ್ಕೆ ನಾವೆಲ್ಲರೂ ಕೈ ಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮೀಪತಿ, ಮಂಡಲ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ, ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಬಾಬು, ಮಾಜಿ ಶಾಸಕರಾದ ಗಂಗಹನುಮಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ರುದ್ರೇಶ್.ಎಂ.ವೈ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಹನುಮಂತರಾಜು ದುರ್ಗಿ ವೆಂಕಟೇಶ್, ಮಂಡಲ ಒಬಿಸಿ ಮೋರ್ಚಾ ಅಧ್ಯಕ್ಷ ಜಗಧೀಶ ಆಚಾರ್, ಹಿರಿಯ ಮುಖಂಡರಾದ ಡಾ.ವೆಂಕಟರಾಮಯ್ಯ, ಕೊರಟಗೆರೆ ಮಂಡಲ ಅಧ್ಯಕ್ಷ ಪವನ್, ಪಾವಗಡ ಮಂಡಲ ಅಧ್ಯಕ್ಷ ರವಿಶಂಕರ್ ನಾಯ್ಕ್, ಶಿರಾ ಗ್ರಾಮಾಂತರ ಅಧ್ಯಕ್ಷ ರಂಗಸ್ವಾಮಿ, ಶಿರಾ ನಗರ ಅಧ್ಯಕ್ಷ ವಿಜಯರಾಜು, ಜಿಲ್ಲಾ ಮಾಧ್ಯಮ ಪ್ರಮುಖ್ ಆದಿಶೇಷ ಗುಪ್ತ, ಕಾರ್ಯಾಲಯ ಕಾರ್ಯದರ್ಶಿ ಸುರೇಶ್, ಯುವ ಮೋರ್ಚಾ ಅಧ್ಯಕ್ಷ ಕಾರ್ತಿಕ್ ಆರಾಧ್ಯ, ಪದಾಧಿಕಾರಿಗಳಾದ ತಿಮ್ಮಜ್ಜ, ಡಾ.ವೆಂಕಟರವಣಪ್ಪ, ನಾಗೇಂದ್ರ, ಜಯಣ್ಣ, ದೀಕ್ಷಿತ್ ಹಾಗೂ ಮುಂತಾದವರು ಇದ್ದರು.
ವರದಿ: ಅಬಿದ್ ಮಧುಗಿರಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


