ಔರಾದ: ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಬಡ ಹಾಗೂ ಮಧ್ಯಮ ವರ್ಗಕ್ಕೆ ಭಾರೀ ತೆರಿಗೆ ವಿನಾಯ್ತಿ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಯುವ ಮುಖಂಡ ಬಾಲಾಜಿ ಕಾಸಲೆ ತಿಳಿಸಿದ್ದಾರೆ.
ತೆರಿಗೆ ಪಾವತಿ ಸರಳೀಕರಣದೊಂದಿಗೆ, ಸುಮಾರು 12 ಲಕ್ಷದವರೆಗಿನ ಆದಾಯವನ್ನು ತೆರಿಗೆ ಮುಕ್ತಗೂಳಿಸಲಾಗಿದ್ದು, ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಮಧ್ಯಮ ವರ್ಗಕ್ಕೆ ದೊರೆತ ಅತಿದೂಡ್ಡ ತೆರೆಗೆ ವಿನಾಯ್ತಿ ಎಂದರೆ ತಪ್ಪಾಗಲಾರದು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಧ್ಯಮ ವರ್ಗದ ಜನರೇ ಹೆಚ್ಚಿರುವ ನಮ್ಮ ದೇಶದಲ್ಲಿ, ಈ ಬಜೆಟ್ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶರವೇಗ ನೀಡಲಿದೆ ಎಂಬುದು ಸಂತಸದ ವಿಚಾರ. ಈ ಮಹತದ ನಿರ್ಧಾರದ ಹಿಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಹಾಗೂ ನರೇಂದ್ರ ಮೋದಿ ಅವರಿಗೆ ಜನತೆ ಪರವಾಗಿ ಧನ್ಯವಾದಗಳು ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx