ಮೈಸೂರು: ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಹೀಗಾಗಿಯೇ ಬಿಜೆಪಿ ಶಾಸಕರು, ಮಾಜಿ ಸಿಎಂ ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಹೀಗಿರುವಾಗ ಬಿಜೆಪಿಯವರಿಗೆ ನಮ್ಮ ನಾಯಕರ ಬಗ್ಗೆ ಮಾತನಾಡಲು ಏನು ಹಕ್ಕಿದೆ ಎಂದು ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಬಿಜೆಪಿಯವರ ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ ಎಂದು ಅವರು ಹೇಳಿದರು.
ಸಚಿವರ ಮನೆಗೆ ಸಿಸಿಟಿವಿ ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವರು ಹನಿಟ್ರ‍್ಯಾಪ್ ಮಾಡಲೆಂದೇ ಸಚಿವರ ಮನೆಗೆ ಬರುತ್ತಾರೆ. ಈಗಾಗಿ ಸಿಸಿಟಿವಿ ಹಾಕಿಸಬೇಕು. ಸಚಿವರ ಮನೆಗಳಿಗೆ ಸಿಸಿಟಿವಿ ಇಲ್ಲದ ವಿಚಾರ ನನಗೆ ಗೊತ್ತಿಲ್ಲ ಎಂದರು.
ಸಿಎಂ ಮನೆಗೆ ಸಿಸಿಟಿವಿ ಇದೆ. ನಾನು ಅಲ್ಲೇ ಇರುವುದರಿಂದ ಸಿಸಿಟಿವಿ ಇರುವ ಬಗ್ಗೆ ನನಗೆ ಗೊತ್ತಿದೆ, ಬೇರೆಯವರ ಮನೆಯ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4