ಆಪರೇಷನ್ ಹಸ್ತದ ಸದ್ದಿಗೆ ಬಿಜೆಪಿ ಹೈಕಮಾಂಡ್ ಬೆಚ್ಚಿಬಿದ್ದಿದೆ. ಆಪರೇಷನ್ ಕಾಂಗ್ರೆಸ್ ತಡೆಯೋಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಖುದ್ದು ಅಖಾಡಕ್ಕೆ ಇಳಿದಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಎಂಟ್ರಿ ಕೊಟ್ಟ ಬಿಎಲ್ ಸಂತೋಷ್, ಶಾಸಕರು, ಮಾಜಿ ಶಾಸಕರು, ಮುಖಂಡರ ಜೊತೆ ಸಭೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಆಪರೇಷನ್ ಹಸ್ತದ ಗುಲ್ಲು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಅಲರ್ಟ್ ಆಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್ ಸಂತೋಷ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಈ ಸಭೆಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಆಪರೇಷನ್‌ಗೆ ಪ್ರತಿತಂತ್ರ ರೂಪಿಸಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ರಣತಂತ್ರ ಹೆಣೆಯೋ ಪ್ಲಾನ್ ಮಾಡಿದ್ದಾರೆ.
ಬಿಜೆಪಿ ಪ್ರಮುಖ ನಾಯಕರು ಗೈರು ಆಗಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿ, ಎಸ್. ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಆರ್. ಅಶೋಕ್, ವಿ. ಸೋಮಣ್ಣ ಸೇರಿ ಪ್ರಮುಖರು ಗೈರು ಆಗಿದ್ದಾರೆ. ಈ ಪೈಕಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣಿನ ಶಸ್ತ್ರಚಿಕಿತ್ಸೆ ಹಿನ್ನೆಲೆ ಸಭೆಗೆ ಗೈರು ಆಗಿದ್ದಾರೆ ಎಂದು ತಿಳಿದು ಬಂದಿದೆ.


