ಬೆಂಗಳೂರು ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯರಿಗೆ ವಾಟ್ಸ್ ಆ್ಯಪ್ ನಲ್ಲಿ ಕರೆ ಮಾಡಿದ್ದ ಯುವತಿಯೊಬ್ಬರು 21 ಸೆಕೆಂಡ್ ಬೆತ್ತಲೆ ವೀಡಿಯೊ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋರಮಂಗಲ ನಿವಾಸಿಯಾಗಿರುವ 58 ವರ್ಷ ವಯಸ್ಸಿನ ವೈದ್ಯರೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.


