ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಯರನ್ನು ಪರಿಚಯಿಸಿಕೊಂಡು ನಂತರ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಹೆಚ್ ಎಸ್ ಆರ್ ಲೇಔಟ್ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ.
ಅಸ್ಸಾಂ ಮೂಲದ ಫೈಸಲ್ ಬಂಧಿತ ಆರೋಪಿ, ಇನ್ ಸ್ಟಾಗ್ರಾಮ್ ನಲ್ಲಿ ಹೆಚ್ಚು ಆ್ಯಕ್ಟಿವ್ ಇರುವ ಮಹಿಳೆಯರ ಪ್ರೊಫೈಲ್ ಹುಡುಕಿ ಫಾಲೋ ಮಾಡುತ್ತಿದ್ದ ಫೈಸಲ್ ನಂತರ ಅವರೊಂದಿಗೆ ಬಣ್ಣ ಬಣ್ಣದ ಮಾತುಗಳನ್ನಾಡಿ ಸ್ನೇಹ ಸಂಪಾದಿಸುತ್ತಿದ್ದ. ನಂತರ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.


