nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆಬ್ರವರಿ 2ರಂದು ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ: ಡಾ.ಸೋಮಶೇಖರ್
    ತಿಪಟೂರು January 24, 2025

    ಫೆಬ್ರವರಿ 2ರಂದು ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ: ಡಾ.ಸೋಮಶೇಖರ್

    By adminJanuary 24, 2025No Comments2 Mins Read
    tipaturu

    ತಿಪಟೂರು:  ನಗರದ ನಗರಸಭೆ ಪಕ್ಕದಲ್ಲಿ  ಅತ್ಯಾಧುನಿಕ ಉಪಕರಣಗಳನ್ನ ಒಳಗೊಂಡ ಶೇಖರ್ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ ನಡೆಯಲಿದೆ ಎಂದು ಬ್ಲಡ್ ಬ್ಯಾಂಕ್  ಮುಖ್ಯಸ್ಥರಾದ ಡಾ.ಸೋಮಶೇಖರ್ ತಿಳಿಸಿದ್ದಾರೆ.

    ನಗರದ ಶೇಖರ್ ಬ್ಲಡ್ ಬ್ಯಾಂಕ್ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಪತರು ನಾಡಿನ ಜನರ ಬಹುದಿನಗಳ ಬೇಡಿಕೆಯಾಗಿದೆ.  ಬ್ಲಡ್ ಬ್ಯಾಂಕ್ ಫೆಬ್ರವರಿ 2ರಂದು ಪ್ರಾರಂಭೋತ್ಸವ ನಡೆಯಲಿದೆ. ಅತಿಥಿಗಳಾಗಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ.   ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಷಡಕ್ಷರಿ,  ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ  ಎಂದು ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕೆರಗೋಡಿ ರಂಗಾಪುರ ಭೂಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿಗಳು, ನೊಣವಿನಕೆರೆ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಋಷಭ ದೇಶೀಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಜಿಗಳು, ತಿಪಟೂರು ಗುರುಕುಲಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಬಸವ ದೇಶಿ ಕೇಂದ್ರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.  ನಾಡಿನ  ರಾಜಕೀಯ ಮುಖಂಡರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸುವರು ಎಂದರು.

    ತಿಪಟೂರು ಸೇರಿದಂತೆ ಸುತ್ತಮುತ್ತಲ ತಾಲೂಕು ಜನರಿಗೆ ತುರ್ತು ಅಗತ್ಯವಾಗಿದ್ದ ಬ್ಲಡ್ ಬ್ಯಾಂಕ್ ಸೌಲಭ್ಯ ತರಲು ಸತತ ನಾಲ್ಕು ವರ್ಷಗಳಿಂದ ಪ್ರಯತ್ನಿಸಿದ್ದು, ಪ್ರಯತ್ನದ ಫಲವಾಗಿ ತಿಪಟೂರಿಗೆ ಅತ್ಯಾಧುನಿಕ ತಂತ್ರಜ್ಞಾನ ಉಳ್ಳಯಂತ್ರೋಪಕರಣಗಳು, ನುರಿತ ತಂತ್ರಜ್ಞರು ಹಾಗೂ ವೈದ್ಯರು ಲಭ್ಯವಿರುತ್ತಾರೆ.  ತಿಪಟೂರು ಸೇರಿದಂತೆ ಸುತ್ತಮುತ್ತಲ ಅನೇಕ ಕಡೆ ಅಪಘಾತಗಳು ಸೇರಿದಂತೆ, ತುರ್ತು ಸಂದರ್ಭಗಳಲ್ಲಿ ಬ್ಲಡ್ ಕೊರತೆಯಿಂದ ಜೀವನ್ಮರಣ ಅನುಭವಿಸಿದ ಸಂದರ್ಭಗಳಿವೆ. ಜನರ ಸಮಸ್ಯೆಗಳನ್ನ ಅರಿತು. ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭ ಮಾಡಬೇಕು ಎಂದು ಸತತ ನಾಲ್ಕು ವರ್ಷದ ಪ್ರಯತ್ನದ ಫಲವಾಗಿ ತಿಪಟೂರಿಗೆ ಬ್ಲಡ್ ಬ್ಯಾಂಕ್ ಅನುಮತಿ ದೊರೆತಿದ್ದು, ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು.

    ತಿಪಟೂರಿನಲ್ಲಿ ಶೇಖರ್ ರಕ್ತನಿಧಿ ಸೆಂಟರ್ ಪ್ರಾರಂಭವಾಗುವುದರಿಂದ, ತಿಪಟೂರು ತುರುವೇಕೆರೆ ಚಿಕ್ಕನಾಯಕನಹಳ್ಳಿ, ಅರಸೀಕೆರೆ ಶ್ರೀರಾಂಪುರ ಸೇರಿದಂತೆ ಸುಮಾರು 70 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಆಗಲಿದೆ. ತುರ್ತು ಅಪಘಾತಗಳು ಸೇರಿದಂತೆ ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಅಗತ್ಯಕ್ಕಾಗಿ ಸುಮಾರು 70 ಕಿಲೋಮೀಟರ್ ದೂರದಿಂದ ರಕ್ತ ತರಬೇಕಿತ್ತು. ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭಗೊಳ್ಳುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಅದೇ ರೀತಿ ಉತ್ತಮವಾದ ಸೇವೆಯನ್ನು ನಮ್ಮ ಬ್ಲಡ್ ಬ್ಯಾಂಕ್ ನಿಂದ ನೀಡಲಾಗುವುದು ಎಂದು ತಿಳಿಸಿದರು.

    ಬ್ಲಡ್ ಬ್ಯಾಕ್ ನಲ್ಲಿ ರಕ್ತದಾನಿಗಳು ನೀಡುವ ರಕ್ತವನ್ನು ಪರೀಕ್ಷೆ ಮಾಡಿ ಹಲವಾರು ವಿಭಾಗಗಳಲ್ಲಿ ವಿಂಗಡಿಸಿ ಅಗತ್ಯವಿರುವಂತಹ ರೋಗಿಗಳಿಗೆ ನೀಡಲಾಗುವುದು ಪರೀಕ್ಷಾ ಶುಲ್ಕ ಹಾಗೂ ಕೇಂದ್ರದ ನಿರ್ವಹಣೆ ಶುಲ್ಕಗಳನ್ನ ಮಾತ್ರ ವಿಧಿಸಲಾಗುವುದು ಕೇಂದ್ರ ಸರ್ಕಾರದ ನಿಯಮಗಳಂತೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರಕ್ಕೆ ರಕ್ತವನ್ನು ನೀಡಲಾಗುವುದು ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಬ್ಲಡ್ ಬ್ಯಾಂಕ್ ತಂತ್ರಜ್ಞರಾದ ನಾಗೇಶ್ ಅದಂ ಉಪಸ್ಥಿತರಿದರು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.