ತಿಪಟೂರು: ನಗರದ ನಗರಸಭೆ ಪಕ್ಕದಲ್ಲಿ ಅತ್ಯಾಧುನಿಕ ಉಪಕರಣಗಳನ್ನ ಒಳಗೊಂಡ ಶೇಖರ್ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ ನಡೆಯಲಿದೆ ಎಂದು ಬ್ಲಡ್ ಬ್ಯಾಂಕ್ ಮುಖ್ಯಸ್ಥರಾದ ಡಾ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಶೇಖರ್ ಬ್ಲಡ್ ಬ್ಯಾಂಕ್ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಪತರು ನಾಡಿನ ಜನರ ಬಹುದಿನಗಳ ಬೇಡಿಕೆಯಾಗಿದೆ. ಬ್ಲಡ್ ಬ್ಯಾಂಕ್ ಫೆಬ್ರವರಿ 2ರಂದು ಪ್ರಾರಂಭೋತ್ಸವ ನಡೆಯಲಿದೆ. ಅತಿಥಿಗಳಾಗಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಷಡಕ್ಷರಿ, ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆರಗೋಡಿ ರಂಗಾಪುರ ಭೂಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿಗಳು, ನೊಣವಿನಕೆರೆ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಋಷಭ ದೇಶೀಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಜಿಗಳು, ತಿಪಟೂರು ಗುರುಕುಲಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಬಸವ ದೇಶಿ ಕೇಂದ್ರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನಾಡಿನ ರಾಜಕೀಯ ಮುಖಂಡರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸುವರು ಎಂದರು.
ತಿಪಟೂರು ಸೇರಿದಂತೆ ಸುತ್ತಮುತ್ತಲ ತಾಲೂಕು ಜನರಿಗೆ ತುರ್ತು ಅಗತ್ಯವಾಗಿದ್ದ ಬ್ಲಡ್ ಬ್ಯಾಂಕ್ ಸೌಲಭ್ಯ ತರಲು ಸತತ ನಾಲ್ಕು ವರ್ಷಗಳಿಂದ ಪ್ರಯತ್ನಿಸಿದ್ದು, ಪ್ರಯತ್ನದ ಫಲವಾಗಿ ತಿಪಟೂರಿಗೆ ಅತ್ಯಾಧುನಿಕ ತಂತ್ರಜ್ಞಾನ ಉಳ್ಳಯಂತ್ರೋಪಕರಣಗಳು, ನುರಿತ ತಂತ್ರಜ್ಞರು ಹಾಗೂ ವೈದ್ಯರು ಲಭ್ಯವಿರುತ್ತಾರೆ. ತಿಪಟೂರು ಸೇರಿದಂತೆ ಸುತ್ತಮುತ್ತಲ ಅನೇಕ ಕಡೆ ಅಪಘಾತಗಳು ಸೇರಿದಂತೆ, ತುರ್ತು ಸಂದರ್ಭಗಳಲ್ಲಿ ಬ್ಲಡ್ ಕೊರತೆಯಿಂದ ಜೀವನ್ಮರಣ ಅನುಭವಿಸಿದ ಸಂದರ್ಭಗಳಿವೆ. ಜನರ ಸಮಸ್ಯೆಗಳನ್ನ ಅರಿತು. ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭ ಮಾಡಬೇಕು ಎಂದು ಸತತ ನಾಲ್ಕು ವರ್ಷದ ಪ್ರಯತ್ನದ ಫಲವಾಗಿ ತಿಪಟೂರಿಗೆ ಬ್ಲಡ್ ಬ್ಯಾಂಕ್ ಅನುಮತಿ ದೊರೆತಿದ್ದು, ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು.
ತಿಪಟೂರಿನಲ್ಲಿ ಶೇಖರ್ ರಕ್ತನಿಧಿ ಸೆಂಟರ್ ಪ್ರಾರಂಭವಾಗುವುದರಿಂದ, ತಿಪಟೂರು ತುರುವೇಕೆರೆ ಚಿಕ್ಕನಾಯಕನಹಳ್ಳಿ, ಅರಸೀಕೆರೆ ಶ್ರೀರಾಂಪುರ ಸೇರಿದಂತೆ ಸುಮಾರು 70 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಆಗಲಿದೆ. ತುರ್ತು ಅಪಘಾತಗಳು ಸೇರಿದಂತೆ ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಅಗತ್ಯಕ್ಕಾಗಿ ಸುಮಾರು 70 ಕಿಲೋಮೀಟರ್ ದೂರದಿಂದ ರಕ್ತ ತರಬೇಕಿತ್ತು. ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭಗೊಳ್ಳುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಅದೇ ರೀತಿ ಉತ್ತಮವಾದ ಸೇವೆಯನ್ನು ನಮ್ಮ ಬ್ಲಡ್ ಬ್ಯಾಂಕ್ ನಿಂದ ನೀಡಲಾಗುವುದು ಎಂದು ತಿಳಿಸಿದರು.
ಬ್ಲಡ್ ಬ್ಯಾಕ್ ನಲ್ಲಿ ರಕ್ತದಾನಿಗಳು ನೀಡುವ ರಕ್ತವನ್ನು ಪರೀಕ್ಷೆ ಮಾಡಿ ಹಲವಾರು ವಿಭಾಗಗಳಲ್ಲಿ ವಿಂಗಡಿಸಿ ಅಗತ್ಯವಿರುವಂತಹ ರೋಗಿಗಳಿಗೆ ನೀಡಲಾಗುವುದು ಪರೀಕ್ಷಾ ಶುಲ್ಕ ಹಾಗೂ ಕೇಂದ್ರದ ನಿರ್ವಹಣೆ ಶುಲ್ಕಗಳನ್ನ ಮಾತ್ರ ವಿಧಿಸಲಾಗುವುದು ಕೇಂದ್ರ ಸರ್ಕಾರದ ನಿಯಮಗಳಂತೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರಕ್ಕೆ ರಕ್ತವನ್ನು ನೀಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಡ್ ಬ್ಯಾಂಕ್ ತಂತ್ರಜ್ಞರಾದ ನಾಗೇಶ್ ಅದಂ ಉಪಸ್ಥಿತರಿದರು
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4